ಭ್ರಷ್ಟಾಚಾರಿ ಇಸ್ರೇಲ್ ಸರ್ಕಾರದ ವಿರುದ್ಧ ತಿರುಗಿಬಿದ್ದ ನಾಗರಿಕರು

ಈ ಸುದ್ದಿಯನ್ನು ಶೇರ್ ಮಾಡಿ

Isrel--02

ಟೆಲ್‍ಅವಿವ್, ಡಿ.4- ಇಸ್ರೇಲ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ಮತ್ತು ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸಾವಿರಾರು ನಾಗರಿಕರು ರಾಜಧಾನಿ ಟಲ್ ಅವಿವ್‍ನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು. ಪ್ರಧಾನಿ ನೆತನ್ಯಾಹು ವಿರುದ್ಧ ಕೇಳಿ ಬಂದಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಲಂಚರುಷುವತ್ತು ಆರೋಪಗಳ ತನಿಖೆ ವಿಳಂಬವಾಗಿ ಸಾಗುತ್ತಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಕರೆದಿದ್ದ ಮಾರ್ಚ್ ಆಫ್ ಶೇಮ್(ನಾಚಿಕೆಗೇಡಿನ ಪಾದಯಾತ್ರೆ) ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ನಾಗರಿಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಧಾನಿ ತನ್ನ ಶ್ರೀಮಂತ ಬೆಂಬಲಿಗರಿಂದ ಅತ್ಯಂತ ದುಬಾರಿ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ ಹಾಗೂ ತಮ್ಮ ಪರವಾಗಿ ವರದಿ ಪ್ರಕಟಿಸಲು ಕೆಲವು ಮಾಧ್ಯಮಗಳ ಮುಖ್ಯಸ್ಥರೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬಿತ್ಯಾದಿ ಆರೋಪಗಳು ಕೇಳಿ ಬಂದಿವೆ.

Facebook Comments

Sri Raghav

Admin