ಅಮಿತ್ ಷಾಗೆ ಬಹಿಷ್ಕಾರ ಹಾಕಬೇಕು : ವಿ.ಎಸ್.ಉಗ್ರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Ugrappa--02

ಬೆಂಗಳೂರು, ಡಿ.5- ರಾಜ್ಯದಲ್ಲಿ ಅಶಾಂತಿ ಉಂಟಾಗುವ ರೀತಿಯಲ್ಲಿ ಉಗ್ರ ಹೋರಾಟ ಮಾಡುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಚಿತಾವಣೆ ಮಾಡಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಬಹಿಷ್ಕಾರ ಹಾಕಬೇಕೆಂದು ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು ರಚಿಸಿರುವ ತಜ್ಞರ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ತಿಳಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂತಹ ಚಿತಾವಣೆ ಮಾಡುತ್ತಿರುವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಜನರು ಬಹಿಷ್ಕಾರ ಹಾಕಬೇಕು. ಸಂಸದ ಪ್ರತಾಪ್‍ಸಿಂಹ ಸೇರಿದಂತೆ ಹಲವರ ಹೇಳಿಕೆಗಳನ್ನು ಗಮನಿಸಿದಾಗ ಅಮಿತ್ ಷಾ ಅವರು ಸೂಚನೆ ನೀಡಿದ್ದಾರೆ ಎಂಬುದು ತಿಳಿದು ಬರುತ್ತಿದೆ ಎಂದರು.

ಹುಣಸೂರಿನಲ್ಲಿ ನಡೆದ ಘಟನೆ ಕುರಿತಂತೆ ವೀಡಿಯೋ ವೀಕ್ಷಿಸಲಾಗಿದ್ದು, ಅದರಲ್ಲಿ ಸಂಸದ ಪ್ರತಾಪ್‍ಸಿಂಹ ಅವರು ಉದ್ದೇಶಪೂರ್ವಕವಾಗಿ ಕಾರನ್ನು ಚಲಾಯಿಸಿಕೊಂಡು ವೇಗವಾಗಿ ಅಲ್ಲಿಂದ ತೆರಳಿದ್ದಾರೆ. ಇವರ ವಿರುದ್ಧ ಕೇಸು ದಾಖಲಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಲಿ ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿರುವುದರಿಂದ ವಿಚಲಿತವಾಗಿರುವ ಬಿಜೆಪಿ ನಾಯಕರು ಅಶಾಂತಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

Facebook Comments

Sri Raghav

Admin