ಬಸ್ ಬರುವುದನ್ನೇ ಕಾದು ಕೂತು ಹಿಂಬದಿ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ

ಈ ಸುದ್ದಿಯನ್ನು ಶೇರ್ ಮಾಡಿ

https://youtu.be/ZOnIqYSYd3U

ಹಾಸನ, ಡಿ.5- ಅಪಘಾತವೆಂದು ಹೇಳಲಾಗಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದಿದ್ದು, ಬಸ್ ಬರುವುದನ್ನೇ ಕಾದು ಕೂತು ಅಪರಿಚಿತ ವ್ಯಕ್ತಿ ಹಿಂಬದಿ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ದೃಢಪಟ್ಟಿದೆ.ಹಾಸನದ ರೈಲ್ವೆ ಗೇಟ್ ಬಳಿ ರಾತ್ರಿ ಕೆಎಸ್‍ಆರ್‍ಟಿಸಿ ಬಸ್ ಚಾಲಕನ ನಿರ್ಲಕ್ಷ್ಯತನದಿಂದ ವ್ಯಕ್ತಿ ಮೇಲೆ ಹರಿದ ಪರಿಣಾಮ ಸಾವನ್ನಪ್ಪಿದ್ದಾನೆಂದು ನಗರ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದರು.

ಚಾಲಕನ ಹೇಳಿಕೆ ಆಧರಿಸಿ ಪೊಲೀಸರು ಮತ್ತೊಮ್ಮೆ ಅಪಘಾತವಾಗಿದ್ದ ಸ್ಥಳದ ಸುತ್ತ ಇದ್ದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದಾಗ, ಈ ಘಟನೆ ಬಸ್ ಚಾಲಕನ ನಿರ್ಲಕ್ಷ್ಯತನದಿಂದ ನಡೆದಿಲ್ಲ ಎಂಬುದು ತಿಳಿದುಬಂದಿದೆ.ಅಪರಿಚಿತ ವ್ಯಕ್ತಿ ಈ ಸ್ಥಳದಲ್ಲಿ ಕೆಎಸ್‍ಆರ್‍ಟಿಸಿ ಬಸ್ ಬರುವುದನ್ನು ಕಾದು ಸ್ವಯಂಪ್ರೇರಿತವಾಗಿ ಹಿಂಬದಿ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ನೈಜ ಘಟನೆ ಬೆಳಕಿಗೆ ಬಂದಿದೆ.  ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin