ಮೊಬೈಲ್ ಟವರ್ ಬ್ಯಾಟರಿ ಕದಿಯುತ್ತಿದ್ದ ಇಬ್ಬರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

mobil
ಮಂಡ್ಯ, ಡಿ.5- ಮೊಬೈಲ್ ಟವರ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಕೆಆರ್‍ಎಸ್ ಠಾಣೆ ಪೊಲೀಸರು ಬಂಧಿಸಿ 4,62,000 ಮೌಲ್ಯದ 66 ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಶಾಂತಿನಗರ ನಿವಾಸಿ ಇಸ್ಮಾಯಿಲ್, ಅಜೀಜ್ ಸೇಠ್ ನಗರ ನಿವಾಸಿ ಮೊಹಮ್ಮದ್ ರಫೀಕ್ ಬಂಧಿತ ಆರೋಪಿಗಳು. ಇಬ್ಬರು ಬೆಂಗಳೂರು-ಮೈಸೂರು ಹೆದ್ದಾರಿ ಮೊಗ್ಗರಹಳ್ಳಿ ಬಳಿ ಬೈಕ್‍ನಲ್ಲಿ ಬ್ಯಾಟರಿಗಳನ್ನು ತೆಗೆದುಕೊಂಡು ಹೋಗುತ್ತಿರುವಾಗ ಬೈಕ್ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಬ್ಯಾಟರಿಗಳು ಪತ್ತೆಯಾಗಿವೆ.

ಇಬ್ಬರನ್ನೂ ವಿಚಾರಣೆ ನಡೆಸಿದಾಗ ಮೊಬೈಲ್ ಟವರ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.
ಕೆಆರ್‍ಎಸ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ 2 ಪ್ರಕರಣ, ಪಾಂಡವಪುರ ಕಿರುಗಾವಲಿನಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿವೆ.ಸಿಪಿಐ ರವೀಂದ್ರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments

Sri Raghav

Admin