ಖಾಸಗಿ ಬಸ್ ಗೆ ಜೀಪ್‍ ಡಿಕ್ಕಿ, ಇಬ್ಬರು ಕಾರ್ಮಿಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

acci

ದಾವಣಗೆರೆ,ಡಿ.6-ಕೂಲಿ ಕೆಲಸಕ್ಕಾಗಿ ಬುಲೆರೊ ಜೀಪ್‍ನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೊ ಜೀಪ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ.  ಮೃತರ ಹೆಸರು, ವಿಳಾಸ ಸದ್ಯ ತಿಳಿದುಬಂದಿಲ್ಲ. ಎಂದಿನಂತೆ ಕೂಲಿ ಕೆಲಸಕ್ಕಾಗಿ ಕಾರ್ಮಿಕರನ್ನು ಬುಲೆರೊ ಜೀಪ್‍ನಲ್ಲಿ ಕರೆದೊಯ್ಯುತ್ತಿದ್ದಾಗ ಹರಿಹರದ ಬಳಿ ಅತಿವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin