ಪತ್ರಕರ್ತರ ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Anil-Raj--0-Ravi-Belegere

ಬೆಂಗಳೂರು,ಡಿ.6-ಹಕ್ಕು ಬಾಧ್ಯತಾ ಸಮಿತಿಯಿಂದ ಶಿಕ್ಷೆಗೆ ಒಳಗಾಗಿದ್ದ ಪ್ರತಕರ್ತರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಅಂತಿಮ ಆದೇಶ ನೀಡುವವರೆಗೂ ಪತ್ರಕರ್ತರನ್ನು ಬಂಧಿಸದಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರನ್ನು ಹಕ್ಕುಬಾಧ್ಯತಾ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಪತ್ರಕರ್ತರಿಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅಂತಿಮ ತೀರ್ಪು ನೀಡುವವರೆಗೆ ಪತ್ರಕರ್ತರನ್ನು ಬಂಧಿಸಬಾರದೆಂದು ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿದೆ. ಕೆ.ಬಿ.ಕೋಳಿವಾಡ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ಪ್ರಕಟವಾದ ಲೇಖನಗಳಿಗೆ ಸಂಬಂಧಿಸಿದಂತೆ ಪತ್ರಕರ್ತರಾದ ರವಿ ಬೆಳಗೆರೆ ಮತ್ತು ಅನಿಲ್ ರಾಜ್ ವಿರುದ್ದ ಹಕ್ಕು ಬಾಧ್ಯತಾ ಸಮಿತಿ ದೂರು ಸಲ್ಲಿಸಿತ್ತು.

ಈ ಕುರಿತು ವಿಚಾರಣೆ ನಡೆಸಿದ ಸಮಿತಿ ವರದಿ ಸಲ್ಲಿಸಿತು. ವರದಿ ಅನ್ವಯ ಪತ್ರಕರ್ತರಿಗೆ ಒಂದು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಲಾಗಿತ್ತು. ಇದನ್ನು ಆಕ್ಷೇಪಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

Facebook Comments

Sri Raghav

Admin