ಪ್ರಜಾಪ್ರಭುತ್ವದ ಕೊಲೆ : ನಟ ವಿಶಾಲ್ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Vishal--012

ಚೆನ್ನೈ,ಡಿ.6- ರಾಧಾಕೃಷ್ಣ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ಇದು ಪ್ರಜಾಪ್ರಭುತ್ವದ ಕೊಲೆ ಎಂದು ನಟ ವಿಶಾಲ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶಾಲ್ ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿದ್ದ ಇಬ್ಬರು ಅನುಮೋದಕರು ಅಫಿಡವಿಟ್‍ನಲ್ಲಿ ಸಹಿ ಮಾಡಿರಲಿಲ್ಲ. ಹೀಗಾಗಿ ನಟನ ನಾಮಪತ್ರವನ್ನು ತಿರಸ್ಕರಿಸಿರುವುದಾಗಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ನಟ ಹಾಗೂ ನಾಡಿಗರ್ ಸಂಗಮ್ ಪ್ರಧಾನ ಕಾರ್ಯದರ್ಶಿಯಾಗಿರುವ ವಿಶಾಲ್ ಅವರು ಕಳೆದ ಶನಿವಾರ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದರು. ಅಲ್ಲದೆ ಸೋಮವಾರ ಆರ್‍ಕೆ ನಗರ ಉಪ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ನಿಧನದಿಂದ ತೆರವಾದ ಆರ್‍ಕೆ ನಗರಕ್ಕೆ ಈಗ ಎರಡನೇ ಬಾರಿ ಉಪ ಚುನಾವಣೆ ನಿಗದಿಯಾಗಿದೆ. ಈ ಹಿಂದೆ ಮತದಾರರಿಗೆ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಉಪ ಚುನಾವಣೆಯನ್ನೇ ರದ್ದುಗೊಳಿಸಿತ್ತು.

Facebook Comments

Sri Raghav

Admin