ಬಾಬರಿ ಮಸೀದಿ ಧ್ವಂಸಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವ್ಯಾಪಕ ಬಂದೋಬಸ್ತ್

Babri-Case
ಲಖನೌ/ನವದೆಹಲಿ, ಡಿ.6- ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿರುವ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದು 25 ವರ್ಷ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.ಈ ದಿನವನ್ನು ಕೆಲವು ಸಂಘಟನೆಗಳು ಕರಾಳ ದಿನವನ್ನಾಗಿ ಆಚರಿಸಿದ್ದರೆ, ಇನ್ನೂ ಕೆಲವು ಸಂಸ್ಥೆಗಳು ಶೌರ್ಯ ದಿನವೆಂದು ಪರಿಗಣಿಸಿವೆ. ಬಾಬರಿ ಮಸೀದಿ ಧ್ವಂಸಕ್ಕೆ 25 ವರ್ಷವಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರ ಪ್ರದೇಶ, ನವದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗಿಭದ್ರತೆ ಮಾಡಲಾಗಿದೆ.

Facebook Comments

Sri Raghav

Admin