ಯದುವಂಶಕ್ಕೆ ಉತ್ತರಾಧಿಕಾರಿಯ ಆಗಮನ, ಗಂಡುಮಗುವಿಗೆ ಜನ್ಮ ನೀಡಿದ ರಾಣಿ ತ್ರಿಶಿಕಾ

Trishika

ಬೆಂಗಳೂರು. ಡಿ.06 : ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.  ಇಂದು ಬೆಳಿಗ್ಗೆಯಷ್ಟೇ ತ್ರಿಶಿಕಾ ಅವರನ್ನು ಬೆಂಗಳೂರಿನ ಇಂದಿರಾನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಇಂದು ಸಂಜೆ ಹೆರಿಯಾಗಿದ್ದು ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಯುವರಾಜನ ಆಗಮನದಿಂದ ಶತಮಾನಗಳ ಮೈಸೂರು ಸಾಮ್ರಾಜ್ಯಕ್ಕೆ ಉತ್ತರಾಧಿಕಾರಿಯ ಆಗಮನವಾದಂತಾಗಿದೆ.

Facebook Comments

Sri Raghav

Admin