ಆದಿಚುಂಚನಗಿರಿ ಮಠಕ್ಕೆ ಭೇಟಿ ವೇಣುಗೋಪಾಲ್, ಪರಮೇಶ್ವರ್ ಭೇಟಿ ನೀಡಿದ್ದೇಕೆ..?

ಈ ಸುದ್ದಿಯನ್ನು ಶೇರ್ ಮಾಡಿ

Param--02

ಬೆಂಗಳೂರು, ಡಿ.7- ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಶ್ರೀಗಳೊಂದಿಗೆ ಇಬ್ಬರು ಸುದೀರ್ಘ ಚರ್ಚೆ ನಡೆಸಿದರು. ಶ್ರೀಗಳ ಭೇಟಿ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ನಾವು ಶ್ರೀಮಠಕ್ಕೆ ಆಗಿಂದಾಗ್ಗೆ ಭೇಟಿ ನೀಡುತ್ತಲೇ ಇರುತ್ತೇವೆ. ಸಿದ್ಧಗಂಗಾ, ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿರುತ್ತೇವೆ. ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಇಂದು ಕೂಡ ಉಸ್ತುವಾರಿಯವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಗುಲ್ಬರ್ಗ ಮತ್ತು ಬೆಳಗಾವಿ ವಿಭಾಗದ ಮುಖಂಡರ ಸಭೆ ನಡೆಯಲಿದೆ ಎಂದು ಹೇಳಿದರು. ಉಭಯ ನಾಯಕರು ಶ್ರೀಗಳ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ನಂತರ ನಿರ್ಮಲಾನಂದ ಶ್ರೀಗಳು ಮಾತನಾಡಿ, ಆದಿಚುಂಚನಗಿರಿ ಮಠ ನಾಥ ಸಂಪ್ರದಾಯದ ಮಠವಾಗಿದೆ. ಗುರು-ಗೋರಂಕರರು ತಪಸ್ಸು ಮಾಡಿ ದೇಶಾದ್ಯಂತ ಮಠ ಸ್ಥಾಪಿಸಿದ್ದಾರೆ. ಇದೇ 9 ಮತ್ತು 10ರಂದು ಆದಿಚುಂಚನಗಿರಿಯಲ್ಲಿ ನಾವನಾಥ ಮಠ ಕಾರ್ಯಕ್ರಮವಿದೆ. ಈ ವೇಳೆ ಮೂರ್ತಿ ಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಎಲ್ಲ ಭಕ್ತಾದಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin