ಆಧಾರ್ ಲಿಂಕ್ ಕಡ್ಡಾಯ ಗಡುವು ಮಾರ್ಚ್ 31ರವರೆಗೆ ವಿಸ್ತರಣೆ

Adhaar--002

ನವದೆಹಲಿ, ಜ.7-ಸರ್ಕಾರದ ವಿವಿಧ ಕಲಾಣ್ಯ ಯೋಜನೆಗಳು ಮತ್ತು ಸೇವೆಗಳನ್ನು ಪಡೆಯುವುದಕ್ಕಾಗಿ ಆಧಾರ್ ಕಡ್ಡಾಯಗೊಳಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಮುಂದಿನ ವರ್ಷ ಮಾರ್ಚ್ 31ರವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಇಂಗಿತ ವ್ಯಕ್ತಪಡಿಸಿದೆ. ಈ ಹಿಂದೆ ಆಧಾರ್ ಲಿಂಕ್‍ಗೆ ಸರ್ಕಾರ ಡಿ.31ರ ಗಡುವನ್ನು ನಿಗದಿಗೊಳಿಸಿತ್ತು. ಇದೇ ವೇಳೆ ಆಧಾರ್ ಕಾರ್ಡ್‍ನನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆಯಾe್ಞÉ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಹಲವು ಮನವಿ ಅರ್ಜಿಗಳ ಬಗ್ಗೆ ಮುಂದಿನ ವಾರ ವಿಚಾರಣೆ ನಡೆಸಲು ಐವರು ನ್ಯಾಯಾಧೀಶರ ಸಂವಿಧಾನ ಪೀಠವೊಂದನ್ನು ರಚಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಈ ಪ್ರಕರಣ ಕುರಿತು ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠಕ್ಕೆ ಕೇಂದ್ರ ಸರ್ಕಾರದ ನಿಲುವನ್ನು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದರು. ವಿವಿಧ ಸೇವೆಗಳು ಮತ್ತು ಯೋಜನೆ-ಕಾರ್ಯಕ್ರಮಗಳೊಂದಿಗೆ ಆಧಾರ್ ಕಾರ್ಡ್‍ನನ್ನು ಜೋಡಣೆ ಮಾಡಲು ಡಿ.31ರಂದು ಅಂತಿಮ ಗಡುವು ವಿಧಿಸಲಾಗಿತ್ತು. ಈಗ ಅದನ್ನು ಮುಂದಿನ ವರ್ಷ ಮಾರ್ಚ್ 31ರವರೆಗೆ ವಿಸ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

ಸರ್ವೋಚ್ಛ ನ್ಯಾಯಾಲಯ ಕಡ್ಡಾಯಗೊಳಿಸಿರುವಂತೆ ಅನಿರ್ಬಂಧಿತ ಮೊಬೈಲ್ ಸೇವೆ ಮುಂದುವರಿಸಲು ಆಧಾರ್ ಲಿಂಕ್ ಮಾಡಲು ವಿಧಿಸಲಾಗಿರುವ ಫೆಬ್ರವರಿ 6ರ ಅಂತಿಮ ಗಡುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಆಧಾರ್ ಯೋಜನೆಯನ್ನು ವಿರೋಧಿಸಿರುವವರ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಶ್ಯಾಮ್ ದಿವಾನ್, ವಿವಿಧ ಸೇವೆಗಳೊಂದಿಗೆ ತಮ್ಮ ಆಧಾರ್ ಕಾರ್ಡ್‍ಗಳನ್ನು ಸಂಪರ್ಕಿಸಲು ವಿಫಲರಾಗುವವರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಖಾತರಿ ನೀಡಬೇಕೆಂದು ಮನವಿ ಮಾಡಿದರು.

ಭಾರತ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಸಂಖ್ಯೆಯನ್ನು ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡುವುದು ಅಕ್ರಮ ಮತ್ತು ಅಸಂವಿಧಾನಿಕ ಎಂದು ಕೆಲವು ಅರ್ಜಿದಾರರು ಸರ್ವೋನ್ನತ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದಾರೆ. ಈ ಎಲ್ಲ ಅರ್ಜಿಗಳ ವಿಚಾರಣೆ ಮುಂದಿನ ವಾರ ನಡೆಯಲಿದೆ.

Facebook Comments

Sri Raghav

Admin