ಕೆಲಸದಿಂದ ಮನೆಗೋಗುತಿದ್ದವ ಕಾಡಾನೆ ದಾಳಿಗೆ ಬಲಿ

eli

ಹಾಸನ, ಡಿ.7- ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಗ್ಗೋಡೆ ಗ್ರಾಮದ ನಿವಾಸಿ ಯೋಗೇಶ್ (42) ಮೃತಪಟ್ಟ ದುರ್ದೈವಿ. ನಿನ್ನೆ ಸಂಜೆ ಯೋಗೇಶ್ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸಕಲೇಶಪುರ ತಾಲ್ಲೂಕಿನ ಹೊಂಕವಳ್ಳಿಯ ಬಳಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಇತ್ತೀಚೆಗೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರು ಬೆಳೆದ ಬೆಳೆಗಳು ನಾಶಗೊಳ್ಳುತ್ತಿದೆ. ಈ ಬಗ್ಗೆ ಹಲವು ಬಾರಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಬಗ್ಗೆ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments