ಮಂಗಳೂರು : ಕ್ಯಾಮರಾದಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ಮಂಗಳೂರು. ಡಿ.07 : ಖಾಸಗಿ ಸಿಟಿ ಬಸ್- ಕಂಟೈನರ್ ಟ್ರಕ್ ನಡುವೆ ಡಿಸೆಂಬರ್ 07ರ ಬೆಳಿಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು , 17 ಮಂದಿ ಗಾಯಗೊಂಡಿದ್ದಾರೆ. ಮಂಗಳೂರಿನ ನಂತೂರು ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿದ್ದು ಘಟನೆಯಲ್ಲಿ ಮೃತಪಟ್ಟವರನ್ನು ಗುರುಪುರ ಕೈಕಂಬದ ಕವಿತಾ (50) ಎಂದು ಗುರುತಿಸಲಾಗಿದೆ. ಬಿಕರ್ನಕಟ್ಟೆಯಿಂದ ವೇಗವಾಗಿ ಬಂದ ಖಾಸಗಿ ಬಸ್ ಹೈವೇಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು, ಇದರ ಏಕಾಏಕಿ ಡಿಕ್ಕಿಯಿಂದಾಗಿ ಲಾರಿ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಡಿಕ್ಕಿ ಉಂಟಾಗಿರುವ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿವೆ. ಘಟನೆಗೆ ಸಂಬಂಧಿಸಿದಂತೆ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Facebook Comments

Sri Raghav

Admin