ಶಾಸಕ ಎಂ.ಕೆ.ಸೋಮಶೇಖರ್‍ಗೆ ಜಾಮೀನುರಹಿತ ಬಂಧನದ ವಾರೆಂಟ್

ಈ ಸುದ್ದಿಯನ್ನು ಶೇರ್ ಮಾಡಿ

MK-Somashekhar-002

ಮೈಸೂರು,ಡಿ.7- ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಮೈಸೂರು ನ್ಯಾಯಾಲಯ ಜಾಮೀನುರಹಿತ ಬಂಧನದ ವಾರೆಂಟ್ ಹೊರಡಿಸಿದೆ.  ಶಾಸಕ ಸೋಮಶೇಖರ್ ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿದ್ದಾರೆಂದು ಮಾಜಿ ಕಾರ್ಪೊರೇಟರ್  ಎಂ.ಸಿ.ಚಿಕ್ಕಣ್ಣ 2008ರ ಮೇನಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದರು.

ಇದರ ವಿರುದ್ದ ಸೋಮಶೇಖರ್ ಸಹ ಪ್ರತಿ ಹೇಳಿಕೆ ನೀಡಿದ್ದರು. ಇದರಿಂದ ಬೇಸರಗೊಂಡ ಚಿಕ್ಕಣ್ಣ ಅವರು ಸೋಮಶೇಖರ್ ವಿರುದ್ಧ ಮೈಸೂರಿನ ಜೆಎಂಎಫ್‍ಸಿ 3ನೇ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಇದೇ ಡಿಸೆಂಬರ್ 4ರಂದು ಸೋಮಶೇಖರ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಅವರು ಹಾಜರಾಗಲಿಲ್ಲ. ಆದ್ದರಿಂದ ನ್ಯಾಯಾಲಯ ಜಾಮೀನುರಹಿತ ಬಂಧನದ ವಾರೆಂಟ್ ಹೊರಡಿಸಿದೆ.

Facebook Comments

Sri Raghav

Admin