40 ಕೇಂದ್ರಗಳಲ್ಲಿ ಬೆಂಬಲ ಬೆಲೆಗೆ ಶೇಂಗಾ ಖರೀದಿ

ಈ ಸುದ್ದಿಯನ್ನು ಶೇರ್ ಮಾಡಿ

Ground-Nut--02

ಬೆಂಗಳೂರು,ಡಿ.7-ಬೆಂಬಲ ಬೆಲೆಯಡಿ ಶೇಂಗಾ ಖರೀದಿಸಲು ರಾಜ್ಯದಲ್ಲಿ 40 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ವಿಂಟಾಲ್‍ಗೆ 4,450 ರೂ. ಬೆಂಬಲ ಬೆಲೆ ನಿಗದಿಯಾಗಿದ್ದು, ರಾಜ್ಯ ಸರ್ಕಾರ 200 ರೂ. ಪ್ರೊತ್ಸಾಹ ಧನ ನೀಡಲಿದೆ. ಶೇಂಗಾ ಖರೀದಿಸಲು ಮುಂಗಡವಾಗಿ 25 ಕೋಟಿ ರೂ. ಬಿಡುಗಡೆ ಮಾಡಿದೆ. ರೈತರು 15 ದಿನಗಳೊಳಗೆ ಶೇಂಗಾ ಮಾರಾಟ ಮಾಡುವ ಬಗ್ಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದರು.

ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲಿ ಶೇಂಗಾ ಬೆಳೆ ಹೆಚ್ಚಾಗಿ ಬೆಳೆಯುತ್ತಿದ್ದು, ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು. 45 ಸಾವಿರ ಮೆಟ್ರಿಕ್ ಟನ್ ಶೇಂಗಾ ಖರೀದಿಸಲು ಕೇಂದ್ರದ ಒಪ್ಪಿಗೆ ದೊರೆತಿದೆ. ರಾಜ್ಯದಲ್ಲಿ ಈ ಬಾರಿ ತೊಗರಿ ಬಂಪರ್ ಬೆಲೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ 5,450 ರೂ. ಕ್ವಿಂಟಾಲ್‍ನಂತೆ ಬೆಂಬಲ ಬೆಲೆಯಡಿ ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು. ಡಿಸೆಂಬರ್ ಅಂತ್ಯದ ವೇಳೆಗೆ ತೊಗರಿ ಬರುವ ನಿರೀಕ್ಷೆ ಇದೆ. ಕಳೆದ ವರ್ಷ 3 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿದ್ದು , ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.

ಮೆಕ್ಕೆಜೋಳವನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಇದನ್ನು ರಾಜ್ಯ ಆಹಾರವಾಗಿ ಬಳಕೆ ಮಾಡುವುದು ಕಡಿಮೆ. ಆದರೆ ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಳಕೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ಸಿಎಂ ಪತ್ರ ಬರೆದಿದ್ದಾರೆ ಎಂದರು. ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಈ ನಿಟ್ಟಿನಲ್ಲಿ ಗಮನಹರಿಸಿ ರಾಜ್ಯ ತೊಗರಿ ಮತ್ತು ಮೆಕ್ಕೆ ಜೋಳದ ಹಿತ ಕಾಪಾಡಬೇಕು ಎಂದು ಅವರು ತಿಳಿಸಿದರು.

Facebook Comments

Sri Raghav

Admin