ಉಸ್ಮಾನಿಯಾ ವಿವಿಯಲ್ಲಿ ಕನ್ನಡ ಭಾಷಾಭಿವೃದ್ದಿ ಬಗೆಗಿನ ಸಂಕಿರಣ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

img

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ವಿವಿಯ ಕನ್ನಡ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ “ಹೊರನಾಡಿನಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಮತ್ತು ಸವಾಲುಗಳು” ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ಉದ್ಘಾಟಿಸಿದರು. ಈ ವೇಳೆ ಖ್ಯಾತ ಸಾಹಿತಿಗಳಾದ ಕೆ.ವಿ. ತಿರುಮಲೇಶ್, ಪ್ರೊ. ವಸಂತ ಕುಷ್ಟಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರಳಿಧರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook Comments