ಮೈಸೂರು ವಿವಿಯಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಬ್ರೇಕ್

ಈ ಸುದ್ದಿಯನ್ನು ಶೇರ್ ಮಾಡಿ

my-un
ಮೈಸೂರು,ಡಿ.8- ಮೈಸೂರು ವಿಶ್ವವಿದ್ಯಾಲಯ ಆವರಣದಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಖಾಸಗಿ ವಾಹನಗಳನ್ನು ನಿಷೇಧಿಸಲು ತೀರ್ಮಾನಿಸಲಾಗಿದೆ. ಇತ್ತೀಚೆಗೆ ನಡೆದ ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಾನಸ ಗಂಗೋತ್ರಿಗೆ ಖಾಸಗಿ ವಾಹನಗಳನ್ನು ನಿಷೇಧಿಸಬೇಕೆಂಬ ತೀರ್ಮಾನ ಕೈಗೊಳ್ಳಲಾಗಿದ್ದು , ವಿವಿ ವಿದ್ಯಾರ್ಥಿಗಳು , ಶಿಕ್ಷಕರು ಮತ್ತು ಉಪನ್ಯಾಸಕರು, ಶಿಕ್ಷಣೇತರ ಸಿಬ್ಬಂದಿಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ನೀಡಬಾರದೆಂದು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಕರು, ಪ್ರಾಧ್ಯಾಪಕರು, ಉಪನ್ಯಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ವಾಹನದ ಪಾಸ್ ಹಾಗೂ ಸ್ಟಿಕ್ಕರ್‍ಗಳನ್ನು ನೀಡಲಾಗುವುದು. ಇದು ಇದ್ದರೆ ಮಾತ್ರ ಒಳಗೆ ಬಿಡಲಾಗುವುದು. ಗಂಗೋತ್ರಿಯ ಭದ್ರತೆ ಹಾಗೂ ಶೈಕ್ಷಣಿಕ ವಾತಾವರಣದ ದೃಷ್ಟಿಯಿಂದ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದೆ. ಗಂಗೋತ್ರಿ ಆವರಣದಲ್ಲಿ ಸಾವಿರಾರು ವಾಹನಗಳು ಸಂಚರಿಸುವುದರಿಂದ ವಾಯುಮಾಲಿನ್ಯ, ಶಬ್ದ ಮಾಲಿನ್ಯ ಹೆಚ್ಚಾಗಿ ಶಿಕ್ಷಣಕ್ಕೆ ಅಡಚಣೆ ಉಂಟಾಗುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಬಾಗಿಲುಗಳನ್ನು ಮುಚ್ಚಲಾಗುವುದು. ವಿವಿಗೆ ಸಂಬಂಧಪಟ್ಟವರು ಬಂದರೆ ತಪಾಸಣಾ ನಡೆಸಿ ಒಳಗೆ ಬಿಡಲಾಗುತ್ತದೆ.

Facebook Comments

Sri Raghav

Admin