ಶಾಲೆಯಲ್ಲಿ ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder--02

ಬಾಗಲಕೋಟೆ,ಡಿ.8- ತಲೆ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿರುವ ಘಟನೆ ಜಮಖಂಡಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಲ್ಯಾಳ ಗ್ರಾಮದ ನಿವಾಸಿ ಸದಾಶಿವ ಕೆಸರಗೊಪ್ಪ(22) ಕೊಲೆಯಾದ ಯುವಕ. ಹುಲ್ಯಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸದಾಶಿವ ಕೆಸರಗೊಪ್ಪ ಮಲಗಿದ್ದ ವೇಳೆ ತಡರಾತ್ರಿ ದುಷ್ಕರ್ಮಿಗಳು ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.   ಇಂದು ಬೆಳಗ್ಗೆ ಗ್ರಾಮಸ್ಥರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಮಖಂಡಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin