ಸರ್ಕಾರಿ ವೆಬ್ಸೈಟ್ ನಲ್ಲಿ ಯಡವಟ್ಟು, ರತ್ನಪ್ರಭಾ ಈಗಲೂ ಹೆಚ್ಚುವರಿ ಕಾರ್ಯದರ್ಶಿ…!

ಈ ಸುದ್ದಿಯನ್ನು ಶೇರ್ ಮಾಡಿ

Ratnaparabha--02

ಬೆಂಗಳೂರು,ಡಿ.8-ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕೆ.ರತ್ನಪ್ರಭಾ ಅವರು ಅಧಿಕಾರ ವಹಿಸಿಕೊಂಡು ಒಂದು ವಾರ ಕಳೆದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವೆಬ್‍ಸೈಟ್‍ನಲ್ಲಿ ಮಾತ್ರ ಅವರು ಇನ್ನೂ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೇ ಮುಂದುವರೆದಿದ್ದಾರೆ. ನ.30ರಂದು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವಯೋನಿವೃತ್ತಿ ಹೊಂದಿದ ಸುಭಾಷ್‍ಚಂದ್ರ ಕುಂಟಿಆ ಅವರು ಈಗಲೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೇ.

ನ.30ರಂದು ಸೇವೆಯಿಂದ ನಿವೃತ್ತಿ ಹೊಂದಿದ ಸುಭಾಷ್‍ಚಂದ್ರ ಕುಂಟಿಆ ಅವರು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ರತ್ನಪ್ರಭಾ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದರು.  ಡಿ.1ರಿಂದ ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಿ.1ರಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು ಕೂಡ ಬದಲಾವಣೆಯಾಗಿದ್ದಾರೆ. ಆದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವೆಬ್‍ಸೈಟ್‍ನಲ್ಲಿ ಹಳೆಯ ಮಾಹಿತಿಯನ್ನೇ ಮುಂದುವರೆಸಲಾಗಿದೆ. ಇದು ಸರ್ಕಾರದ ಮಂದಗತಿ ಆಡಳಿತಕ್ಕೆ ಹಿಡಿದ ಕನ್ನಡಿಯಂತಾಗಿದೆ.

ಸರ್ಕಾರದಲ್ಲಾಗಿರುವ ಬದಲಾವಣೆಗಳನ್ನು ತಾಜಾ ಮಾಹಿತಿಯನ್ನು ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡಿಲ್ಲ. ಹೀಗಾಗಿ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಟಿ.ಎಂ.ವಿಜಯಭಾಸ್ಕರ್ ಈಗ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಿ.ವಿ.ಪ್ರಸಾದ್ ಅವರು ಅಭಿವೃದ್ಧಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶೇಷವೆಂದರೆ ಐಎಎಸ್ ಅಧಿಕಾರಿಗಳ ವರ್ಗಾವಣೆ ನಿರ್ವಹಣೆಯನ್ನು ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನಿರ್ವಹಿಸುತ್ತಿದೆ. ಆದರೆ ವೆಬ್‍ಸೈಟ್‍ನಲ್ಲಿ ಮಾತ್ರ ಕಾಲಕಾಲಕ್ಕೆ ಆಗುವ ಬದಲಾವಣೆಗಳ ಮಾಹಿತಿಯನ್ನು ಪ್ರಕಟಿಸದಿರುವುದು ವಿಪರ್ಯಾಸದ ಸಂಗತಿ.

Facebook Comments

Sri Raghav

Admin