ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Gelletin--02

ಚಾಮರಾಜನಗರ, ಡಿ.10- ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೋಟಿಸಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಅರಳೀಪುರ ಗ್ರಾಮದ ಸುರೇಶ್ (37), ರಾಮು (36) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಬೆಳಗ್ಗೆ ರಾಮಯ್ಯ ಎಂಬುವರ ಜಮೀನಿನಲ್ಲಿ ಭೂಮಿ ಸಮತಟ್ಟು ಮಾಡಲು ಹೋಗಿದ್ದರು. ಚಳಿಯಿಂದಾಗಿ ಬಿಸಿ ಕಾಯಿಸಿಕೊಳ್ಳಲು ತೆಂಗಿನ ತರಗಿಗೆ ಬೆಂಕಿ ಹಚ್ಚಿದ್ದಾರೆ. ಇದು ಧಗ ಧಗನೆ ಉರಿದು ಅಕ್ಕ ಪಕ್ಕ ವ್ಯಾಪಿಸಿದೆ. ಅಲ್ಲೇ ಸಮೀಪದಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿಗಳಿಗೆ ಬೆಂಕಿ ತಾಗಿ ಸ್ಫೋಟಗೊಂಡಿದೆ. ಈ ವೇಳೆ ಬೆಳೆಗಳು ನಾಶವಾಗಿದೆ.

ಇಬ್ಬರ ಬಟ್ಟೆಗೆ ಬೆಂಕಿ ತಗುಲಿ ತೀವ್ರ ಸುಟ್ಟ ಗಾಯಗಳಾಗಿವೆ. ಇದರಲ್ಲಿ ಸುರೇಶ್ ಪರಿಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ರಾಮಯ್ಯ ಅವರು ಜಮೀನಿನಲ್ಲಿದ್ದ ಬಂಡೆ ಸಿಡಿಸಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿಟ್ಟಿದ್ದರು ಎಂದು ತಿಳಿದು ಬಂದಿದೆ. ರಾಮಸಮುದ್ರ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin