ಮತದಾರರ ಪಟ್ಟಿಗೆ ಆಧಾರ್‍ಲಿಂಕ್ ಮಾಡಲು ಆಯೋಗಕ್ಕೆ ಎಚ್‍ಡಿಕೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--02

ಬೆಂಗಳೂರು, ಡಿ.11- ಪಾರದರ್ಶಕ ಚುನಾವಣೆ ಹಾಗೂ ಅಕ್ರಮ ಮಾರ್ಗ ತಡೆಯುವ ದೃಷ್ಟಿಯಿಂದ ಮತದಾರರ ಗುರುತಿನ ಚೀಟಿಗೆ ಆಧಾರ್‍ಲಿಂಕ್ ಮಾಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಚುನಾವಣಾ ಆಯೋಗದ ಮುಖ್ಯಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಈ ಮನವಿ ಮಾಡಿರುವ ಅವರು, ಆಯೋಗದ ಆದೇಶದನ್ವಯ ಕರ್ನಾಟಕದಲ್ಲಿ 2018ರ ಜನವರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆಯುತ್ತಿದೆ. ಈ ವೇಳೆ ಮತದಾರರ ಪಟ್ಟಿಯಲ್ಲಿ ನೋಂದಣಿ ಸೇರಿದಂತೆ ಇನ್ನಿತರೆ ಲೋಪದೋಷಗಳನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

ಮತದಾರರ ಹೆಸರು ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಅಥವಾ ಲೋಕಸಭಾ ಕ್ಷೇತ್ರಗಳಲ್ಲಿ ನೋಂದಣಿ ಆಗದಂತೆ ಕ್ರಮ ವಹಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರಿಗೆ ಆಧಾರ್‍ಲಿಂಕ್ ಮಾಡಿದರೆ ಇಂತಹ ದುರುಪಯೋಗವನ್ನು ತಡೆಯಲು ಸಾಧ್ಯವಾಗಲಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪ್ರಸಕ್ತ ಸಾಲಿನಲ್ಲಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವ ಮೂಲಕ ಪಾರದರ್ಶಕ ಚುನಾವಣೆಗೆ ಅವಕಾಶ ಮಾಡಿಕೊಡುವಂತೆ ಕೋರಿದ್ದಾರೆ.

Facebook Comments

Sri Raghav

Admin