ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಆಯ್ಕೆ, ಕೆಪಿಸಿಸಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ

ಈ ಸುದ್ದಿಯನ್ನು ಶೇರ್ ಮಾಡಿ

KPCC--02

ಬೆಂಗಳೂರು, ಡಿ.12- ಎಐಸಿಸಿ ಅಧ್ಯಕ್ಷರಾಗಿ ರಾಹುಲ್‍ಗಾಂಧಿ ಅವಿರೋಧವಾಗಿ ಆಯ್ಕೆಯಾಗಿದ್ದನ್ನು ಸ್ವಾಗತಿಸಿ ಕೆಪಿಸಿಸಿ ಕಚೇರಿಯಲ್ಲಿಂದು ಸಿಹಿ ಹಂಚಲಾಯಿತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಮತ್ತಿತರ ಮುಖಂಡರು ಕೆಪಿಸಿಸಿ ಕಚೇರಿ ಮುಂದೆ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ರಾಹುಲ್‍ಗಾಂಧಿಗೆ ಜೈಕಾರ ಹಾಕಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ್, ರಾಹುಲ್‍ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಇನ್ನಷ್ಟು ಬಲಗೊಳ್ಳಲಿದೆ. ಗುಜರಾತ್ ಮತ್ತು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Rahul--01

ಸುಮಾರು 20 ವರ್ಷಗಳಿಂದಲೂ ಎಐಸಿಸಿ ಅಧ್ಯಕ್ಷರಾಗಿ ಅವಿರತ ಸೇವೆ ಸಲ್ಲಿಸಿದ ಸೋನಿಯಾಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಪರಮೇಶ್ವರ್, ಅವರ ಆರೋಗ್ಯ ಸುಧಾರಿಸಿ ಮನಃಶಾಂತಿ ದೊರೆಯಲಿ ಎಂದು ಹಾರೈಸಿದರು. ರಾಹುಲ್‍ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರ ನೇತೃತ್ವದಲ್ಲಿ ಬೆಂಗಳೂರು ಅಥವಾ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸ್ಥಳ ಮತ್ತು ದಿನಾಂಕದ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

Facebook Comments

Sri Raghav

Admin