ಮಹಿಳೆಯ ಪ್ರಜ್ಞೆ ತಪ್ಪಿಸಿ ಗ್ಯಾಂಗ್‍ರೇಪ್

ಈ ಸುದ್ದಿಯನ್ನು ಶೇರ್ ಮಾಡಿ

Gang-Rape--01

ಮುಜಾಫರ್‍ನಗರ್, ಡಿ.13-ಮಹಿಳೆಯೊಬ್ಬಳಿಗೆ ಮತ್ತು ಬರಿಸುವ ಪಾನೀಯ ನೀಡಿ ಆಕೆಯ ಪ್ರಜ್ಞೆ ತಪ್ಪಿಸಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.   ಇಬ್ಬರು ವ್ಯಕ್ತಿಗಳು ನಿನ್ನೆ ಬರ್ಲಾ-ಬಸೆಡಾ ರಸ್ತೆಯಲ್ಲಿ ಮಹಿಳೆಗೆ ಮಾದಕ ವಸ್ತು ನೀಡಿ ಆಕೆಯ ಪ್ರಜ್ಞೆ ತಪ್ಪಿಸಿದರು. ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.   28 ವರ್ಷದ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

Facebook Comments

Sri Raghav

Admin