ವಾಯುವಿಹಾರಕ್ಕೆ ತೆರಳಿದ್ದ ವೃದ್ಧನಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

krp-1

ಕೆಆರ್ ಪೇಟೆ, ಡಿ.13- ವಾಯು ವಿಹಾರ ಮಾಡುತ್ತಿದ್ದ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪಟ್ಟಣದ ಹೇಮಾವತಿ ಬಡಾವಣೆ ನಿವಾಸಿ ಕೆ.ಎನ್. ಶಿವೇಗೌಡ (70) ಮೃತ ವ್ಯಕ್ತಿ. ಮೈಸೂರಿನ ಬಂಡಿಪಾಳ್ಯ ಮಾರುಕಟ್ಟೆಯಲ್ಲಿ ಅಕ್ಕಿ ಅಂಗಡಿ ಇಟ್ಟುಕೊಂಡಿದ್ದ ಇವರು ಪಟ್ಟಣದ ಹೇಮಾವತಿ ಬಡಾವಣೆಯಲ್ಲಿ ವಾಸವಿದ್ದರು. ನಿನ್ನೆ ಸಂಜೆ ವಾಯುವಿಹಾರ ಮಾಡಿ ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿ ಗೇಟಿನ ಬಳಿ ಬರುತ್ತಿದ್ದಾಗ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸರ್ಕಲ್ ಇನ್ಸ್‍ಪೆಕ್ಟರ್ ಹೆಚ್.ಬಿ.ವೆಂಕಟೇಶಯ್ಯ ಮತ್ತು ಸಬ್‍ಇನ್ಸ್‍ಪೆಕ್ಟರ್ ಕೆ.ಎನ್.ಗಿರೀಶ್ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್ ಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments