ಅಪಘಾತ ; ಒಂದೇ ಬೈಕ್‍ನಲ್ಲಿದ್ದ ಮೂವರು ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

21
ಹಾವೇರಿ,ಡಿ.14- ಅಪರಿಚತ ವಾಹನ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಚಿಕ್ಕಮರಳಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಣ್ ಹುಡೇದ್(32), ಸುರೇಶ್ ಮೈದೂರು(32) ಫಕೀರೇಶ್ ಯುತ್ತೆನಹಳ್ಳಿ(32) ಮೃತಪಟ್ಟ ದುರ್ದೈವಿಗಳು.

ನಿನ್ನೆ ರಾತ್ರಿ ಯಲಗಚ್ಚಿ ಗ್ರಾಮದಿಂದ ಸ್ವಗ್ರಾಮಕ್ಕೆ ಒಂದೇ ಬೈಕ್‍ನಲ್ಲಿ ಸವಣೂರು ತಾಲ್ಲೂಕಿನ ಯಲಗಚ್ಚ ಗ್ರಾಮದ ಬಳಿ ಮೂವರು ತೆರಳುತ್ತಿದ್ದ ವೇಳೆ ಅತಿವೇಗವಾಗಿ ಬಂದ ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin