ಮುಂದಿನ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸುವಂತೆ ಆಯೋಗಕ್ಕೆ ಸಿದ್ದರಾಮಯ್ಯ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

Voting--02

ರಾಯಚೂರು, ಡಿ.15-ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಗೆ ಮತಪತ್ರವನ್ನು ಬಳಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ಬಳಸುತ್ತಿರುವ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‍ನಲ್ಲಿ ಅಕ್ರಮಗಳು ನಡೆಯುವ ಆರೋಪಗಳು ಕೇಳಿ ಬರುತ್ತಿರುವುದರಿಂದ ಈ ಹಿಂದಿನ ಪದ್ಧತಿಯಂತೆ ಮತಪತ್ರವನ್ನು ಬಳಸಿಯೇ ವಿಧಾನಸಭೆ ಚುನಾವಣೆ ನಡೆಸಬೇಕೆಂದು ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ. ಜೊತೆಗೆ ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದು ಅವರು ಜಿಲ್ಲೆಯ ಮಾನ್ವಿ ಎಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸುತ್ತಿರುವುದರಿಂದ ಕಾಂಗ್ರೆಸ್‍ಗೆ ಮತಯಂತ್ರಗಳ ಅನುಮಾನ ಆರಂಭಗೊಂಡಿದೆ. ಹೀಗಾಗಿ ಹಳೇ ಪದ್ಧತಿಯಲ್ಲೇ ಚುನಾವಣೆ ನಡೆಸಿ ಎಂದು ಒತ್ತಾಯಿಸುತ್ತಿದೆ.

ಇತ್ತೀಚೆಗೆ ದೆಹಲಿಯಿಂದ ಆಗಮಿಸಿದ ಬಹುತೇಕ ಕಾಂಗ್ರೆಸ್ ನಾಯಕರು ಪದೇ ಪದೇ ಚುನಾವಣೆ ವ್ಯವಸ್ಥೆ ಮೇಲೆ ಕಣ್ಣಿಡಿ. ಮತಯಂತ್ರಗಳ ದುರ್ಬಳಕೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಎಂದು ರಾಜ್ಯ ನಾಯಕರಿಗೆ ಸೂಚನೆ ನೀಡುತ್ತಿದ್ದಾರೆ. ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ನಂತರವಂತೂ ಕಾಂಗ್ರೆಸ್‍ನ ಅನುಮಾನಗಳು ಇನ್ನಷ್ಟು ಬಲಗೊಂಡಿವೆ. ಗುಜರಾತ್ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲುವು ಸಾಧಿಸಿದರೆ ಕಾಂಗ್ರೆಸ್‍ನ ಜಂಘಾ ಬಲವೇ ಉಡುಗಿ ಹೋಗಲಿದ್ದು, ಇವಿಎಂ ಮೇಲಿನ ಅನುಮಾನಕ್ಕೆ ಇನ್ನಷ್ಟು ಪುಷ್ಟಿ ಸಿಕ್ಕಂತಾಗುತ್ತದೆ.   ಹಾಗಾಗಿ ಮುಂದಿನ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಸುವಂತೆ ಕಾಂಗ್ರೆಸ್ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಅತಿ ಶೀಘ್ರ ಹಾಗೂ ಸುವ್ಯವಸ್ಥಿತ ಚುನಾವಣೆಗಾಗಿ ಮತಯಂತ್ರಗಳ ಬಳಕೆ ಕಳೆದ 10 ವರ್ಷಗಳಿಂದಲೂ ಚಾಲ್ತಿಯಲ್ಲಿದೆ.

Facebook Comments

Sri Raghav

Admin