ಲಂಕಾ ವಿರುದ್ಧ ಏಕದಿನ ಸರಣಿ ವಶಪಡಿಸಿಕೊಂಡ ಭಾರತ, 3ನೇ ಪಂದ್ಯದಲ್ಲಿ ಭರ್ಜರಿ ಗೆಲುವು

ಈ ಸುದ್ದಿಯನ್ನು ಶೇರ್ ಮಾಡಿ

Dhavan--01

ವಿಶಾಖಪಟ್ಟಣ. ಡಿ.17 : ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಶಿಖರ್ ಧವನ್ ಅಮೋಘ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ರಲ್ಲಿ ಸರಣಿ ಗೆದ್ದುಕೊಂಡಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಟೀಂ ಇಂಡಿಯಾ, ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 215 ರನ್ ಗಳಿಗೆ ತನ್ನ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಸರಣಿ ಗೆಲ್ಲಲು 216ರನ್ ಗಳು ಗುರಿ ಬೆನ್ನತ್ತಿದ ಭಾರತ, ಧವನ್ ಶತಕ ಹಾಗೂ ಅಯ್ಯರ್ ಸಮಯೋಚಿತ ಅರ್ಧಶತಕದ ನೆರವಿನಿಂದ 32.1 ಓವರ್ಗಳಲ್ಲೇ ಎರಡು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. ಭಾರತ ಪರ ರೋಹಿತ್ ಶರ್ಮಾ 7, ಧವನ್ ಅಜಯ 100 ರನ್, ಶ್ರೇಯಸ್ ಅಯ್ಯರ್ 65, ಕಾರ್ತಿಕ್ ಅಜಯ 26 ರನ್ ಗಳಿಸಿದರು.

Facebook Comments

Sri Raghav

Admin