4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕಲ್ಲಿನಿಂದ ತಲೆ ಜಜ್ಜಿ ಕಗ್ಗೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Girl-Rape--02

ಭೋಪಾಲ್, ಡಿ.17-ದೇಶದ ವಿವಿಧ ರಾಜ್ಯಗಳಲ್ಲಿ ಅಪ್ರಾಪ್ತರ ಮೇಲೆ ಲೈಂಗಿಕ ದುರಾಚಾರ ಪ್ರಕರಣಗಳು ಮರುಕಳಿಸುತ್ತಿದ್ದು, ಮಧ್ಯಪ್ರದೇಶದಲ್ಲಿ ನಾಲ್ಕು ವರ್ಷ ಬುಡಕಟ್ಟು ಬಾಲಕಿ ಮೇಲೆ ದುಷ್ಕರ್ಮಿಯೊಬ್ಬ ಅತ್ಯಾಚಾರ ಎಸಗಿ ಕಲ್ಲಿನಿಂದ ತಲೆ ಜಜ್ಜಿ ಕೊಂದಿರುವ ಭೀಕರ ಘಟನೆ ನಡೆದಿದೆ. ಮನವಾರ್ ಪ್ರದೇಶದಲ್ಲಿ ಈ ಕೃತ್ಯ ನಡೆದಿದ್ದು, ತನ್ನ ಗುಡಿಸಲು ಪಕ್ಕದಲ್ಲೇ ಇದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಆರೋಪದ ಮೇಲೆ ಕರಣ್ (25) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ತಪ್ಪೋಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ.

Facebook Comments

Sri Raghav

Admin