ಎಸ್‍ಎಸ್‍ಎಲ್‍ಸಿ, ಪಿಯುಸಿ ವೇಳಾಪಟ್ಟಿಯನ್ನು ಈಗಾಗಲೇ ಚುನಾವಣಾ ಆಯೋಗಕ್ಕೆ ನೀಡಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

Tanveer-Sait

ಬೆಂಗಳೂರು, ಡಿ.20-ಮುಂದಿನ ಮಾರ್ಚ್-ಏಪ್ರಿಲ್‍ನಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ, ಪಿಯುಸಿ ವೇಳಾಪಟ್ಟಿಯನ್ನು ಈಗಾಗಲೇ ಚುನಾವಣಾ ಆಯೋಗಕ್ಕೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ತಿಳಿಸಿದ್ದಾರೆ. ಪಿಯು ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 1 ರಿಂದ 13 ರವರೆಗೆ ಪಿಯುಸಿ ಪರೀಕ್ಷೆ ನಿಗದಿಯಾಗಿದ್ದು, ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಪ್ರಶ್ನೆ ಪತ್ರಿಕೆಗೋಳನ್ನು 2 ಭಾಷೆಗಳಲ್ಲಿ ಮುದ್ರಣ ಮಾಡಲಾಗುವುದು ಎಂದ ಅವರು, ಪರೀಕ್ಷಾ ಅಕ್ರಮ ತಡೆಗಟ್ಟಲು ಕಳೆದ ವರ್ಷದಂತೆ ಈ ಬಾರಿಯೂ ಕರ್ನಾಟಕ ಸೆಕ್ಯೂರ್ ಎಕ್ಸಾಮ್ ಸಿಸ್ಟಮ್ ಅಳವಡಿಸಲಾಗುವುದು ಎಂದರು. ಸಚಿವರ ಈ ರೀತಿ ಪತ್ರಿಕಾಗೋಷ್ಠಿಯ ನಡುವೆ ಕೆಲವರು ಇದು ಚುನಾವಣೆಯನ್ನು ಮುಂದೂಡುವ ಪ್ರಕ್ರಿಯೆಯಿರಬಹುದು ಎಂದು ಹೇಳುತ್ತಿದ್ದಾರೆ. ಒಟ್ಟಾರೆ ಏಪ್ರಿಲ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿದ ನಂತರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಆದರೆ ಮಾರ್ಚ್‍ನಲ್ಲಿಯೇ ಕೇಂದ್ರ ಚುನಾವಣಾ ಆಯೋಗ ಮತದಾನದ ದಿನಾಂಕವನ್ನು ಘೋಷಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Facebook Comments

Sri Raghav

Admin