ಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ, ಇಬ್ಬರಿಗೆ ಜೀವಾವಧಿ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Jailed-01

ಚಿತ್ರದುರ್ಗ, ಡಿ.20- ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೆ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.ಸಂತೋಷ್ (22), ರಾಕೇಶ್ (22) ಶಿಕ್ಷೆಗೆ ಒಳಗಾದವರು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿ ಕಳೆದ 2015ರ ಯುಗಾದಿ ಹಬ್ಬದಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಒಳನುಗ್ಗಿದ ಈ ಇಬ್ಬರು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಹೊಳಲ್ಕೆರೆ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಇಬ್ಬರಿಗೂ ತಲಾ 30 ಸಾವಿರ ದಂಡ ವಿಧಿಸಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

Facebook Comments

Sri Raghav

Admin