ಮಹಿಳೆ ಹೊಟ್ಟೆಯಲ್ಲಿದ್ದ ಐದೂವರೆ ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಈ ಸುದ್ದಿಯನ್ನು ಶೇರ್ ಮಾಡಿ

Doctors--02

ಚಿಕ್ಕಬಳ್ಳಾಪುರ, ಡಿ.22- ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು ಐದೂವರೆ ಕೆಜಿ ತೂಕದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ಜಿಲ್ಲಾಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 29 ವರ್ಷದ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ ಐದೂವರೆ ಕೆ.ಜಿ. ತೂಕದ ಗರ್ಭಕೋಶದ ಗಡ್ಡೆಯನ್ನು ಹೊರತೆಗೆಯಲಾಗಿದ್ದು, ಮಹಿಳೆ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ತಿಳಿಸಿದ್ದಾರೆ.

ಯಶಸ್ವೀ ಶಸ್ತ್ರಚಿಕಿತ್ಸೆಯನ್ನು ನಡೆಸಿದ ವೈದ್ಯರಾದ ಡಾ.ಅರುಣ್, ಡಾ.ದೊರೆಸ್ವಾಮಿ, ಡಾ.ವಿಜಯ ಮತ್ತು ಶುಶ್ರೂಷಕರಾದ ವನಜಾ ಮತ್ತು ಸಾವಿತ್ರಿ ಅವರು ಶ್ರಮವಹಿಸಿದ್ದರು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾಶಸ್ತ್ರ ಚಿಕಿತ್ಸಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin