ಶೀಘ್ರದಲ್ಲೇ 18,000 ಪೊಲೀಸರ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--02

ಕೆಂಗೇರಿ, ಡಿ.22- ಸಿಬ್ಬಂದಿ ಕೊರತೆ ನೀಗಿಸಲು ರಾಜ್ಯದಲ್ಲಿ 18 ಸಾವಿರ ಜಾಲೀಸರನ್ನು ಶೀಘ್ರವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನಾಗರಬಾವಿಯಲ್ಲಿ ಜಾಲೀಸ್ ಗೃಹ 3ನೇ ಹಂತದ ಯೋಜನೆಯಡಿಯಲ್ಲಿ 256 ಕಾನ್‍ಸ್ಟೇಬಲ್‍ಗಳಿಗೆ ವಸತಿ ಸಮುಚ್ಚಯ ನಿರ್ಮಾಣ ಮಾಡುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದÀರು. ರಾಜ್ಯದಲ್ಲಿ 11 ಸಾವಿರ ಜಾಲೀಸ್ ವಸತಿ ಗೃಹ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದ್ದು, ಸಹಾಯಕ ಇನ್ಸ್‍ಪೆಕ್ಟರ್‍ರವರಿಗೆ 786 ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ಬಿಜೆಪಿ ಪಕ್ಷದವರು ಕೇವಲ ಸುಳ್ಳು ಮಾಹಿತಿ ನೀಡುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅಂತಹ ಯಾವುದೇ ಸಮಸ್ಯೆಗಳು ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಜಾಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕೆಂಬ ಉದ್ದೇಶದಿಂದ ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಲಾಗಿದ್ದು, ನಾಗರಿಕರಿಗೆ ಯಾವುದೇ ರೀತಿಯ ತೊಂದರೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು. ಶಾಸಕ ಮುನಿರತ್ನ ಮಾತನಾಡಿ, ಅನ್ನಪೂರ್ಣೇಶ್ವರಿನಗರ ಜಾಲೀಸ್ ಠಾಣೆಗೆ ನಿವೇಶನವನ್ನು ದೊರಕಿಸಿಕೊಡಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ಸದಸ್ಯ ಜಿ.ಮೋಹನ್ ಕುಮಾರ್, ಬೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಎಂ.ಮಂಜುನಾಥ್, ಜಾಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು, ಕರ್ನಾಟಕ ಜಾೀಲಿಸ್ ವಸತಿ ಗೃಹನಿರ್ಮಾಣದ ವ್ಯವಸ್ಥಾಪಕ ನಿರ್ದೇಶಕ ಹೆಚ್.ಸಿ.ಕಿಶೋರ್‍ಚಂದ್ರ, ಬೆಂಗಳೂರು ಜಾಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin