‘ಅನಂತ್‍ಕುಮಾರ್ ಹೆಗಡೆಗೆ ಮತಿಭ್ರಮಣೆಯಾಗಿದೆ, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ’

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar--01

ಕೊಪ್ಪಳ, ಡಿ.25-ಜಾತ್ಯತೀತವಾದಿಗಳು ವಿಚಾರವಾದಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅನಂತ್‍ಕುಮಾರ್ ಹೆಗಡೆ ಅವರ ಹೇಳಿಕೆ ಖಂಡಿಸಿ ಕೊಪ್ಪಳದ ಅಶೋಕ ವೃತ್ತದಲ್ಲಿ ಶಾಸಕ ರಾಘವೇಂದ್ರ ಯತ್ನಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಾತ್ಯತೀತ ವಿಚಾರವಾದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಮನುಸ್ಮೃತಿ ಪುಸ್ತಕ ದಹಿಸಿದರು.

ಅನಂತ್‍ಕುಮಾರ್ ಹೆಗಡೆ ಅವರಿಗೆ ಮತಿಭ್ರಮಣೆಯಾಗಿದೆ, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಜಾತ್ಯತೀತರಿಗೆ ಅಪ್ಪ-ಅಮ್ಮಂದಿರ ಅರ್ಥ ಏನೆಂಬುದು ತಿಳಿದಿರುವುದಿಲ್ಲ ಎಂದು ಹೇಳುವ ಮೂಲಕ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೇಶದ ಸಂಸ್ಕøತಿ ಬಗ್ಗೆ ಅರಿವಿಲ್ಲದವರು ಇಂತಹ ಹೇಳಿಕೆ ನೀಡಿದ್ದಾರೆ. ಅಲ್ಲದೆ ಸಂವಿಧಾನವನ್ನು ಬದಲಿಸುವುದಕ್ಕೆ ನಾವು ಬಂದಿರುವುದು ಎಂದು ಹೇಳಿರುವ ಇವರನ್ನು ಪ್ರಧಾನಿ ಮೋದಿಯವರು ಸಂಪುಟದಿಂದ ಕೂಡಲೇ ಕೈಬಿಡಬೇಕು ಇಲ್ಲದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಅವರು ಎಚ್ಚರಿಸಿದರು.

ನಮ್ಮ ದೇಶ ವಿವಿಧ ಜಾತಿ, ಧರ್ಮಗಳನ್ನು ಒಳಗೊಂಡಿದೆ. ವಿವಿಧತೆಯಲ್ಲಿ ಏಕತೆಯನ್ನೊಳಗೊಂಡ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೆ ಸಂವಿಧಾನವೇ ಮೂಲ ಆಧಾರ. ಇದನ್ನೇ ಬದಲಾಯಿಸಲು ಹೊರಟಿದ್ದಾರೆ. ಇದು ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ. ಕೂಡಲೇ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು. ಇವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Facebook Comments

Sri Raghav

Admin