ಬೈಕ್‍ನಲ್ಲಿ ಹಿಂಬಾಲಿಸಿ ಬಂದು ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Bike-01

ಬೆಂಗಳೂರು, ಡಿ.25- ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ಮೂವರು ಅಡ್ಡಗಟ್ಟಿ ಬೆದರಿಸಿ ಖಾಲಿ ಪೇಪರ್‍ಗೆ ಸಹಿ ಹಾಕಿಸಿಕೊಂಡಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಕುಮಾರ್ ಎಂಬುವರು ರಾತ್ರಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ವಿಐಟಿ ಕ್ರಾಸ್ ಬಳಿ ಕಾರಿನಲ್ಲಿ ಹಿಂಬಾಲಿಸಿ ಬಂದ ಮೂವರು ಇವರ ಬೈಕ್‍ಗೆ ಡಿಕ್ಕಿ ಹೊಡೆಸಿ, ಬೀಳಿಸಿದ್ದಾರೆ. ನಂತರ ಕಾರಿನಿಂದ ಇಳಿದ ಮೂವರು ವಿಜಯಕುಮಾರ್ ಅವರನ್ನು ಬೆದರಿಸಿ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin