ಮಹದಾಯಿ ವಿವಾದ : ಪ್ರಧಾನಿ ಮಧ್ಯಸ್ಥಿಕೆಗೆ ಎಸ್.ಆರ್.ಪಾಟೀಲ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

s-r-patil

ಬೆಂಗಳೂರು,ಡಿ.27-ಮಹದಾಯಿ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿತಿಕೆ ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮಹದಾಯಿ ವಿಚಾರದಲ್ಲಿ ರಾಜಕಾರಣ ಮಾಡಿದರೆ ನೀರು ಬರುವುದಿಲ್ಲ. ರಾಜಕಾರಣವನ್ನು ಬಿಟ್ಟು ಮಧ್ಯಪ್ರವೇಶಿಸಿ ಇರುವ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.  ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವಾರು ಬಾರಿ ಗೋವಾ ಸರ್ಕಾರಕ್ಕೆ ಪತ್ರ ಬರೆದಿದೆ. ಪ್ರಧಾನಿಯವರ ಬಳಿ ಸರ್ವಪಕ್ಷ ನಿಯೋಗ ತೆರಳಿ ಮನವಿ ಮಾಡಲಾಗಿದೆ.

ಮೂರು ರಾಜ್ಯಗಳ ವಿವಾದ ಬಗೆಹರಿಸಲು ಮುಖ್ಯಮಂತ್ರಿಗಳ ಸಭೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿಗಳು ನಿಗದಿಪಡಿಸಿದ್ದರು. ಆದರೆ ಗೋವಾ ಮುಖ್ಯಮಂತ್ರಿಗಳು ಸಭೆಗೆ ಬರಲಿಲ್ಲ. ಹೀಗಾಗಿ ನಮ್ಮ ಪ್ರಯತ್ನ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈಗ ಬಿಜೆಪಿಯವರು ಈ ವಿವಾದವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಮಗೆ ವಿವಾದವನ್ನು ಪ್ರಾಮಾಣಿಕವಾಗಿ ಬಗೆಹರಿಸುವುದು ಅತಿಮುಖ್ಯವಾಗಿದೆ.  ಕೆಪಿಸಿಸಿ ಕಚೇರಿ ಬಳಿ ಬಿಜೆಪಿಯವರು ಪ್ರತಿಭಟನೆ ಮಾಡಿದ್ದಾರೆ. ನಾವು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿಲ್ಲ. ಕಾಂಗ್ರೆಸ್‍ನವರು ಪ್ರತಿಭಟನೆ ಮಾಡಲಿಲ್ಲ. ಮಹದಾಯಿ ರೈತರು ಪ್ರತಿಭಟನೆ ಮಾಡಿದ್ದಾರೆ ಎಂದರು.   ಮಹದಾಯಿ ವಿವಾದಕ್ಕೆ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ. ಈ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿತಿಕೆಯೊಂದಿಗೆ ವಿವಾದ ಬಗೆಹರಿಯಬೇಕು ಎಂದು ಹೇಳಿದರು.

Facebook Comments

Sri Raghav

Admin