‘ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಸಿದರೆ ಚುನಾವಣೆಯಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತೀವಿ’

ಈ ಸುದ್ದಿಯನ್ನು ಶೇರ್ ಮಾಡಿ

Sadashiva--01

ಬೆಂಗಳೂರು, ಡಿ.29- ದಲಿತ ಸಮುದಾಯದ ಮರಣ ಶಾಸನ ಎಂದೇ ವ್ಯಾಖ್ಯಾನಿಸಲಾದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಅನುಷ್ಠಾನಗೊಳಸಿದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ರವಾನಿಸಿದೆ. ನಗರದಲ್ಲಿ ದಲಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಮಕೃಷ್ಣಪ್ಪ, ಬೋವಿ ಮಠದ ಪೀಠಾಧ್ಯಕ್ಷ ಇಮ್ಮಡಿ ಸಿದ್ದರಾಮೇಶ್ವರ, ಅಖಿಲ ಕರ್ನಾಟಕ ಬೋವಿ ವೇದಿಕೆಯ ಮುಖಂಡ ಕೊಟ್ರೇಶ್, ಅಶೋಕ್ ಲಿಂಬಾವಳಿ ನೇತೃತ್ವದಲ್ಲಿ ನಗರದ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಬೃಹತ್ ಜಾಥಾ ನಡೆಸಿ, ಪ್ರತಿಭಟನೆ ನಡೆಸಲಾಯಿತು.

ನ್ಯಾಯಮೂರ್ತಿ ಸದಾಶಿವ ಆಯೋಗ ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ವರದಿಯನ್ನು ಅನುಷ್ಠಾನಕ್ಕೆ ತರಬಾರದು. ಈ ವರದಿ ಜಾರಿಗೊಳಿಸುವ ಸಂಬಂಧ ಇದೇ 31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿಯ ಎಡ-ಬಲ ಸಮುದಾಯದ ಸಚಿವರು, ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಮಾತುಕತೆ ನಂತರ ವರದಿ ಅನುಷ್ಠಾನಗೊಳಿಸಬಾರದು, ಅದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ದಲಿತರ ಹಿತ ಕಾಪಾಡುವ ಕಳಕಳಿ ನಿಮ್ಮಲ್ಲಿದ್ದರೆ ಕೂಡಲೇ ವರದಿಯನ್ನು ತಿರಸ್ಕರಿಸಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕದ , ಕಲಬುರಗಿ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಗದಗ ಸೇರಿದಂತೆ ಸಾವಿರಾರು ಸಂಖ್ಯೆ ಕಾರ್ಯಕರ್ತರು ಪರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಶಕ್ತಿ ಪ್ರದರ್ಶಿಸಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಬೋವಿ, ಲಂಬಾಣಿ, ಕೊರಚ, ಕೊರಮ, ಸಮುದಾಯಗಳ 4 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿ ವರದಿ ವಿರೋಧದ ಧ್ವನಿ ಎತ್ತಿದರು. ನ್ಯಾ.ಸದಾಶಿವ ಆಯೋಗ ಒಳಮೀಸಲಾತಿ ಜಾರಿ ಕುರಿತಂತೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಎಡಗೈ ಹಾಗೂ ಬಲಗೈ ತಂಡದ ನಡುವೆ ಕಿತ್ತಾಟ ಉಂಟಾಗಿದ್ದು, ಒಳಮೀಸಲಾತಿ ಜಾರಿಯಾಗಬೇಕು ಎಂಬುದು ಎಡಗೈ ಸಮುದಾಯದವರ ಒತ್ತಾಯವಾದರೆ, ಜಾರಿ ಮಾಡದಂತೆ ಬಲಗೈ ಸಮುದಾಯ ಆಗ್ರಹಿಸಿದೆ. ಈ ಪರಿಸ್ಥಿತಿ ನಿಭಾಯಿಸಲು ಮುಖ್ಯಮಂತ್ರಿಗಳು ಸಭೆ ಕರೆದಿದ್ದರು.

ಇದನ್ನು ಮುಂದೂಡುವಂತೆ ಕೆಲ ನಾಯಕರು ಒತ್ತಾಯಿಸುತ್ತಿದ್ದು, ಲೋಕಸಭೆ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಜ.2ರವರೆಗೂ ಸಭೆ ಮುಂದೂಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜ.13ರಂದು ಸಭೆ ನಿಗದಿಯಾಗಿದೆ.  ಪರಿಶಿಷ್ಟ ಜಾತಿಯಲ್ಲೇ ಕೆಲ ಪಂಗಡಗಳಿಗೆ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ಮಂದಿ ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಬಾರದು ಎಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.

ಭದ್ರತೆ:  ರೈಲ್ವೆ ನಿಲ್ದಾಣದಿಂದ ಆರಂಭಗೊಂಡ ಬೃಹತ್ ರ್ಯಾಲಿಗೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ 500 ಪೆÇಲೀಸರನ್ನು ನಿಯೋಜಿಸಲಾಗಿತ್ತು. ಒಬ್ಬರು ಡಿಸಿಪಿ, ಮೂವರು ಎಸಿಪಿ ಸೇರಿದಂತೆ ಬಿಗಿ ಬಂದೋಬಸ್ತ್‍ನಲ್ಲಿ ರ್ಯಾಲಿ ನಡೆಸಲಾಯಿತು.

Facebook Comments

Sri Raghav

Admin