ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Accident--02

ಹುನಗುಂದ,ಡಿ.30- ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಗರಾಳ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಡರಾತ್ರಿ ನಡೆದಿದೆ.  ಬಾಗಲಕೋಟೆಯ ಪಂಕಜ ಹರಿನಾರಾಯಣ ಸಿಂಗಿ(45), ಪುಷ್ಪ ಭಾಯಿ ಧರಕ್(65), ಶ್ರೀಕಂಠ್ ಧರಕ್(63), ಉಮಾ ಸಿಂಗಿ(44) ಮೃತಪಟ್ಟಿರುವ ದುರ್ದೈವಿಗಳು.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಶ್ರೀಧರ್ ಬದರಿ ನಾರಾಯಣ ಧರಕ್(27), ಸುನೀಲ, ಗಿರಿಧರಲಾಲ ಸೋಮಾನಿ(46), ದೀಪಕ್ ವಿಷ್ಣುಕಾಂತ್ ಬಹೇತಿ(25) ಅವರನ್ನು ಬಾಗಲಕೋಟೆಯ ಕುಮಾರೇಶ್ವರ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚವರಲೆಟ್ ಕಾರಿನಲ್ಲಿ ಬಳ್ಳಾರಿಯ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್ ಬಾಗಲಕೋಟೆಗೆ ಬರುವಾಗ ತಡರಾತ್ರಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡರು ಎಂದು ಹೇಳಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಹುನಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin