ವಿಜಯಪುರ ದಲಿತ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ : ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Arreste--TV

ವಿಜಯಪುರ, ಡಿ.30- ರಾಜ್ಯದೆಲ್ಲೆಡೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಸಿಐಡಿ ಪೊಲೀಸರ ವಶದಲ್ಲಿದ್ದ ಇವರ ಕಸ್ಟಡಿ ನಿನ್ನೆ ಅಂತ್ಯಗೊಂಡಿದ್ದು, ಎಲ್ಲ ಆರೋಪಿಗಳನ್ನೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿತ್ತು.

ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿ ನಾಲ್ವರಲ್ಲಿ ಇಬ್ಬರು ಅಪ್ರಾಪ್ತರನ್ನು ಬಾಲ ನ್ಯಾಯಮಂಡಳಿಗೆ ಹಾಗೂ ಇನ್ನಿಬ್ಬರನ್ನು ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

Facebook Comments

Sri Raghav

Admin