ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಹಾಸನ, ಡಿ.31-ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ , ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಗಂಡಸಿ ಹೋಬಳಿಯ ಬಾಗಿವಾಳ್ ಗ್ರಾಮದ ನಿವಾಸಿಗಳಾದ ಸುರೇಶ್(37), ಪ್ರದೀಪ್(38) ಮೃತ ದುರ್ದೈವಿಗಳು.   ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿನಿಂದ ಗಂಡಸಿಗೆ ತೆರಳುತ್ತಿದ್ದ ವೇಳೆ ಚನ್ನರಾಯಪಟ್ಟಣ ತಾಲ್ಲೂಕಿನ ಸಿಂಗೇನಹಳ್ಳಿ ಬಳಿ ಕಾರು ಚಾಲನ ನಿಯಂತ್ರಣ ತಪ್ಪಿ ಪಲ್ಡಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin