ಹೊಸ ವರ್ಷದ ದಿನವೇ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02

ಕುಣಿಗಲ್, ಜ.1- ಹೊಸ ವರ್ಷದ ದಿನವೇ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಗವಿಮಠದ ಬಳಿ ಇಂದು ಮುಂಜಾನೆ ಸಂಭವಿಸಿದೆ.  ಮೂಲತಃ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿಯ ಚೌಡನಕುಪ್ಪೆ ಗ್ರಾಮದ ಮದ್ದೂರಿನಲ್ಲಿ ವಾಸಿಸುತ್ತಿದ್ದ ಸಿದ್ದೋಜಿರಾವ್ (60), ಉಷಾ ಬಾಯಿ (38), ಭುವನಾ (16) , ಕೀರ್ತನಾ (7) , ಹಿತೇಶ್ (4), ಮೃತ ದುರ್ದೈವಿಗಳು.

ಹೊಸ ವರ್ಷದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಕಾರಿನಲ್ಲಿ ಮದ್ದೂರಿನಿಂದ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನಕ್ಕೆ ತೆರಳುವಾಗ ಮದ್ದೂರು-ತುಮಕೂರು ಮಧ್ಯೆ ಬರುವ ಗವಿ ಮಠದ ಬಳಿ ಮಗುವೊಂದು ಅಡ್ಡ ಬಂದ ಪರಿಣಾಮ ಮಗುವನ್ನು ಕಾಪಾಡಲು ಹೋಗಿ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಹರೀಶ್ ಎಂಬುವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಸದಸ್ಯರ ಆಕ್ರಂದನ: ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಶಾಸಕ ಡಿ.ನಾಗರಾಜಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂಬಂಧ ಕುಣಿಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin