ಸರ್ಕಾರಿ ಆಸ್ಪತ್ರೆಯಲ್ಲಿ ದಿಢೀರ್ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

Hospital--01

ಗುಡಿಬಂಡೆ, ಜ.2- ಶಾರ್ಟ್ ಸಕ್ರ್ಯೂಟ್‍ಗೊಂಡು ಆಸ್ಪತ್ರೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಸ್ಪತ್ರೆಯಲ್ಲಿದ್ದ ಆರೋಗ್ಯ ಸಲಕರಣೆಗಳು ಹಾಗೂ ಪೀಠೋಪಕರಣಗಳು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಜ್ವಾಲೆ ಆಸ್ಪತ್ರೆ ತುಂಬೆಲ್ಲ ಆವರಿಸಿ ಪೀಠೋಪಕರಣಗಳು ಹಾಗೂ ಆರೋಗ್ಯ ಪರೀಕ್ಷೆಯ ಸಲಕರಣೆಗಳು, ಔಷಧಿ ಸೇರಿದಂತೆ ಮತ್ತಿತರ ವಸ್ತುಗಳು ಸುಟ್ಟು ಕರಕಲಾಗಿವೆ. ವೈದ್ಯರು, ನರ್ಸ್‍ಗಳು, ರೋಗಿಗಳು ಆಸ್ಪತ್ರೆಯಲ್ಲಿ ಇಲ್ಲದಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದು, ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ಗುಡಿಬಂಡೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.

Facebook Comments

Sri Raghav

Admin