ತ್ರಿವಳಿ ತಲಾಖ್ ಮಸೂದೆ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ : ಜೇಟ್ಲಿ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

Arun-Jaitly--1

ನವದೆಹಲಿ, ಜ.3-ತ್ರಿವಳಿ ತಲಾಖ್ ಮಸೂದೆ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಹಿರಿಯ ಧುರೀಣ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಟೀಕಿಸಿದ್ದಾರೆ. ಲೋಕಸಭೆಯಲ್ಲಿ ಮಸೂದೆಗೆ ಬೆಂಬಲ ನೀಡಿದ್ದ ಕಾಂಗ್ರೆಸ್ ರಾಜ್ಯಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಲು ಯತ್ನಿಸುತ್ತಾ ಇಬ್ಬಗೆ ಧೋರಣೆ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಜಿಎಸ್‍ಟಿ ಮಸೂದೆಯಂತೆ ಸಂಸತ್ತಿನ ಉಭಯ ಸದನಗಳಲ್ಲೂ ತ್ರಿವಳಿ ತಲಾಖ್ ಮಸೂದೆಗೆ ಒಮ್ಮತ ಮೂಡಿಸಬೇಕೆಂಬುದು ಸರ್ಕಾರದ ಇಚ್ಚೆಯಾಗಿದೆ. ಆದರೆ ಕಾಂಗೆಸ್ ಈ ವಿಚಾರದಲ್ಲಿ ದ್ವಿಮುಖ ನೀತಿ ತೋರುತ್ತಿರುವುದು ಸರಿಯಲ್ಲ ಎಂದು ಜೇಟ್ಲಿ ಟೀಕಿಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರ ಸಚಿವ ಅನಂತಕುಮಾರ್, ಜೇಟ್ಲಿ ಅವರು ವ್ಯಕ್ತಪಡಿಸಿದ ಅಸಮಾಧಾನಕ್ಕೆ ಧನಿಗೂಡಿಸಿದರು.

Facebook Comments

Sri Raghav

Admin