ಉತ್ತರ ಕರ್ನಾಟಕದಲ್ಲಿ 3 ದಿನ ಕುಮಾರಸ್ವಾಮಿ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಜ.4- ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಉದ್ದೇಶದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಾಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದಿನಿಂದಲೇ ಚುನಾವಣಾ ಸಿದ್ಧತಾ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ ಇಂದು ಮಡಿಕೇರಿ ಜಿಲ್ಲೆಯ ಕುಶಾಲನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ನಾಳೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವ ಅವರು ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಜ.6ರಂದು ಬಾದಾಮಿ ತಾಲ್ಲೂಕಿನ ಕೇರೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮುಧೋಳ ತಾಲ್ಲೂಕಿನ ಯಡಹಳ್ಳಿ ಹಾಗೂ ಮುಧೋಳದಲ್ಲಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜ.7ರಂದು ಜಮಖಂಡಿಯಲ್ಲಿ ವಾಲ್ಮೀಕಿ ಸಮಾಜದ ಕುಂಭಮೇಳಕ್ಕೆ ಚಾಲನೆ ನೀಡಲಿರುವ ಕುಮಾರಸ್ವಾಮಿ ಅವರು, ತೆರದಾಳ ವಿಧಾನಸಭಾ ಕ್ಷೇತ್ರದ ಬನಹಟ್ಟಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂರು ದಿನಗಳ ಕಾಲ ನಿರಂತರ ಉತ್ತರ ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿರುವ ಕುಮಾರಸ್ವಾಮಿ ಜ.7ರಂದು ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ.

Facebook Comments

Sri Raghav

Admin