ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ : ರಮಾನಾಥ ರೈ

ಈ ಸುದ್ದಿಯನ್ನು ಶೇರ್ ಮಾಡಿ

Ramanath-Rai--01

ಬೆಂಗಳೂರು, ಜ.4- ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಶಾಂತಿ-ಸುವ್ಯವಸ್ಥೆಗೆ ಭಂಗ ಬರಬಾರದು ಎಂಬ ಕಾರಣದಿಂದ ಶವದ ಮೆರವಣಿಗೆಗೆ ಅವಕಾಶ ನೀಡಿಲ್ಲ ಎಂದು ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ. ದೀಪಕ್‍ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆದ ಮೇಲೆ ಸತ್ಯಾಂಶ ಹೊರಬೀಳಲಿದೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳು ನಮ್ಮ ರಾಜ್ಯದಲ್ಲಿ ಮಾತ್ರ ಇಲ್ಲ, ದೇಶದ ಹಲವೆಡೆ ಇವೆ. ಕೇಂದ್ರ ಸರ್ಕಾರವೇ ಆ ಸಂಘಟನೆಗಳನ್ನು ನಿಷೇಧಿಸಲಿ ಎಂದು ಸಂಸದೆ ಶೋಭಾ ಹೇಳಿಕೆಗೆ ತಿರುಗೇಟು ನೀಡಿದರು.

Facebook Comments

Sri Raghav

Admin