ದೀಪಕ್‍ರಾವ್ ಕೊಲೆ ಪ್ರಕರಣವನ್ನುಸಿಬಿಐಗೆ ಒಪ್ಪಿಸುವಂತೆ ದೆಹಲಿಯಲ್ಲಿ ಸಂಸದರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Protest

ನವದೆಹಲಿ,ಜ.4- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಬಿಜೆಪಿ ಕಾರ್ಯಕರ್ತ ದೀಪಕ್‍ರಾವ್ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ತಕ್ಷಣವೇ ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಸಂಸದರು ಇಂದು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಸಂಸತ್‍ನ ಕಲಾಪ ಆರಂಭಕ್ಕೂ ಮುನ್ನ ಗಾಂಧಿ ಪ್ರತಿಮೆ ಮುಂದೆ ರಾಜ್ಯ ಸಂಸದರಾದ ಪ್ರಹ್ಲಾದ್ ಜೋಷಿ, ಶೋಭ ಕರಂದ್ಲಾಜೆ, ಸುರೇಶ್ ಅಂಗಡಿ, ಪಿ.ಸಿ.ಮೋಹನ್, ಪ್ರತಾಪ್ ಸಿಂಹ, ಗದ್ದಿಗೌಡರು, ಭಗವಂತ ಕೂಬ, ಶಿವಕುಮಾರ್ ಉದಾಸೀ, ಕರಡಿ ಸಂಗಣ್ಣ , ರಾಜ್ಯಸಭಾ ಸದಸ್ಯರಾದ ಪ್ರಭಾಕರ್ ಕೋರೆ, ಬಸವರಾಜ್ ಪಾಟೀಲ್ ಸೇಡಂ ಮತ್ತಿತರರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಫಲಕ ಹಿಡಿದು ಕೆಲಕಾಲ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರ ಒಂದು ಸಮುದಾಯವನ್ನು ಓಲೈಸುವ ನೆಪದಲ್ಲಿ ಹಿಂದುಗಳ ಮೇಲೆ ನಿರಂತರ ದಬ್ಬಾಳಿಕೆ, ಕೊಲೆ, ಸುಲಿಗೆ ನಡೆಯುತ್ತಿದ್ದರೂ ಎಚ್ಚೆತ್ತುಕೊಂಡಿಲ್ಲ. ನಿನ್ನೆ ಮಂಗಳೂರಿನ ಹೊರವಲಯದಲ್ಲಿ ದೀಪಕ್ ರಾವ್‍ನನ್ನು ಹಾಡುಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಗ್ಗೊಲೆ ಮಾಡಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಪ್ರಹ್ಲಾದ್ ಜೋಷಿ ಆರೋಪಿಸಿದರು.

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತಿತರ ಭಾಗಗಳಲ್ಲಿ ಕೆಲ ಮೂಲಭೂತ ಸಂಘಟನೆಗಳು ಹಿಂದು ಮತ್ತು ಸಂಘಪರಿವಾರದ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪದೇ ಪದೇ ಕೊಲೆ, ಹಲ್ಲೆ ನಡೆಸುವಂತ ಕೃತ್ಯಗಳನ್ನು ನಿರಂತರವಾಗಿ ನಡೆಸುತ್ತಲೇ ಇದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇಂಥ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ದೂರಿದರು.  ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ , ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ರಾಮನಾಥ್ ರೈ ನೇರ ಕಾರಣ. ನೈತಿಕ ಹೊಣೆಯನ್ನು ಈ ಮೂವರು ಹೊರಬೇಕೆಂದು ಒತ್ತಾಯಿಸಿದರು.

Facebook Comments

Sri Raghav

Admin