ಪಿಎಫ್‍ಐ ಸಂಘಟನೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

PFI--01

ಅರಸೀಕೆರೆ, ಜ.4- ಪಿಎಫ್‍ಐ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ದಕ್ಷಿಣ ಕನ್ನಡ ಸೇರಿದಂತೆ ಹಲವು ಕಡೆ ನಡೆಯುತ್ತಿರುವ ಸರಣಿ ಕೊಲೆ ಘಟನೆಗಳಲ್ಲಿ ಈ ಸಂಘಟನೆ ಹೆಸರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಂಗಳೂರು, ಬೆಳ್ತಂಗಡಿ, ಸೂರತ್ಕಲ್ ಸೇರಿದಂತೆ ಹಲವೆಡೆ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆದಿದ್ದು, ಇದರಲ್ಲಿ ಈ ಸಂಘಟನೆ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಬಂಧಿತ ಆರೋಪಿಗಳು ಕೂಡ ಈ ಸಂಘಟನೆಗೆ ಸೇರಿದವರಾಗಿದ್ದಾರೆ. ವಿಧಾನಸಭೆ, ಲೋಕಸಭೆಯಲ್ಲಿ ಸಂಘಟನೆ ನಿಷೇಧದ ಬಗ್ಗೆ ಚರ್ಚೆ ನಡೆದಿದೆ. ಹಾಗಾಗಿ ಸಂಘಟನೆಯನ್ನು ನಿಷೇಧ ಮಾಡುವ ಸಂಬಂಧ ಹಿರಿಯ ಅಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin