ಕಾಬೂಲ್‍ನಲ್ಲಿ ಮಾನವ ಬಾಂಬ್ ದಾಳಿಗೆ 11 ಸಾವು, 25 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Kabul--02

ಕಾಬೂಲ್, ಜ.5-ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್‍ನಲ್ಲಿ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪ್ರತಿಭಟನೆ ನಡೆಯುತ್ತಿದ್ದ ಸ್ಥಳವೊಂದರ ಬಳಿ ನಡೆದ ಮಾನವ ಬಾಂಬ್ ಸ್ಫೋಟದಲ್ಲಿ 11 ಮಂದಿ ಹತರಾಗಿ, ಇತರ 25 ಜನರಿಗೆ ತೀವ್ರ ಗಾಯಗಳಾಗಿವೆ. ಕಳೆದ ವಾರ ಕಾಬೂಲ್‍ನಲ್ಲಿ ಶಿಯಾ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಐಎಸ್ ಉಗ್ರರು ನಡೆಸಿದ ಆತ್ಮಾಹತ್ಯೆ ದಾಳಿಯಲ್ಲಿ 40 ಮಂದಿ ಹತರಾಗಿ, ಅನೇಕರು ಗಾಯಗೊಂಡಿದ್ದರು. ಈ ಕೃತ್ಯದ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯಾಕಾಂಡ ಮರುಕಳಿಸಿದೆ. ಪ್ರತಿಭಟನಾನಿರತರು ಮತ್ತು ಭದ್ರತೆಗೆ ನಿಯೋಜಿತರಾಗಿದ್ದ ಪೊಲೀಸರು ಇದ್ದ ಸ್ಥಳದ ಬಳಿ ಮಾನವ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ. ಈ ದಾಳಿಯಲ್ಲಿ 11 ಮಂದಿ ಮೃತಪಟ್ಟರೆಂದು ಆರೋಗ್ಯ ಸಚಿವಾಲಯದ ವಕ್ತಾರ ವಹೀದ್ ಮಜ್‍ರೋ ತಿಳಿಸಿದ್ದಾರೆ.

Facebook Comments

Sri Raghav

Admin