ಕೇಂದ್ರದ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆ ಪ್ರತಾಪ್‍ಸಿಂಹ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Pratap--01

ಮೈಸೂರು,ಜ.5- ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಕೇಂದ್ರದ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಐಬಿಪಿಎಸ್, ಆರ್‍ಆರ್‍ಬಿ ಅಧಿಕಾರಿ ಹಾಗೂ ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ನಡೆದಿರುವ ಪರೀಕ್ಷೆಯಲ್ಲಿ ಕರ್ನಾಟಕ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಾಧ್ಯಾನತೆ ನೀಡಬೇಕೆಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಬ್ಯಾಂಕ್ ನೇಮಕಾತಿಯಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ಬ್ಯಾಂಕ್ ವ್ಯವಹಾರದಲ್ಲಿ ಉಂಟಾಗುತ್ತಿರುವ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವರನ್ನು ಕೋರಿದ್ದಾರೆ. ಇತರ ರಾಜ್ಯದ ಅಭ್ಯರ್ಥಿಗಳು ಕರ್ನಾಟಕದಲ್ಲಿರುವ ಬ್ಯಾಂಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ಕಡೆ ಸ್ಥಳೀಯ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿದ್ದರೆ ಮತ್ತೊಂದೆಡೆ ಹೊರರಾಜ್ಯದ ಭಾಷಾ ಸಮಸ್ಯೆ ಉಂಟಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗ ದೊರಕುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Facebook Comments

Sri Raghav

Admin