ಪುದುಚೇರಿಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಕಿರಣ್‍ಬೇಡಿ-ಸಿಎಂ ಸ್ವಾಮಿ ನಡುವೆ ಜಟಾಪಟಿ

ಈ ಸುದ್ದಿಯನ್ನು ಶೇರ್ ಮಾಡಿ

Kiran

ಪುದುಚೇರಿ, ಜ.5-ಕೇಂದ್ರಾಡಳಿತ ಪ್ರದೇಶ ಪುದುಚೇರಿ(ಪಾಂಡಿಚೇರಿ)ಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಕಿರಣ್ ಬೇಡಿ ಮತ್ತು ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನಡುವಣ ಜಟಾಪಟಿ ಮುಂದುವರಿದಿದೆ. ಈ ಸಂಬಂಧ ಕಿರಣ್ ಬೇಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿಯವರು ತಮ್ಮ ಮೇಲೆ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.  ಪುದುಚೇರಿಯಲ್ಲಿ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ನಾರಾಯಣಸ್ವಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಆರೋಪಿಸಿದ್ದರು. ಈ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿರುವ ಕಿರಣ್‍ಬೇಡಿ, ತಾವು ಕಲಾಣ್ಯ ಯೋಜನೆಗಳಿಗೆ ಎಂದೂ ಅಡ್ಡಿಯಾಗಿಲ್ಲ ಎಂದು ಹೇಳಿದ್ದಾರೆ.   ನಿನ್ನೆ ದೆಹಲಿಯಿಂದ ಪುದಚೇರಿಗೆ ಹಿಂದಿರುಗಿರುವ ಅವರು ತಾವು ಪ್ರಧಾನಿ ಅವರಿಗೆ ಬರೆದಿರುವ ಪತ್ರದ ಪ್ರತಿಯನ್ನು ವಾಟ್ಸ್ ಆ್ಯಪ್ ಮೂಲಕ ಸುದ್ದಿಗಾರರ ಜೊತೆ ಹಂಚಿಕೊಂಡಿದ್ದಾರೆ.

Facebook Comments

Sri Raghav

Admin