ಮಹಾಮೈತ್ರಿ ಪ್ರಸ್ತಾಪ ಇಲ್ಲ, ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha--01

ಹಾಸನ, ಜ.5- ರಾಜ್ಯದಲ್ಲಿ ಮಹಾಮೈತ್ರಿ ಪ್ರಸ್ತಾಪ ಇಲ್ಲ. ಸೀತಾರಾಂ ಯಚೂರಿ ಹೇಳಿಕೆ ರಾಷ್ಟ್ರಮಟ್ಟಕ್ಕೆ ಸೀಮಿತ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಶಕ್ತಿಗಳ ವಿರುದ್ಧ ದೇಶದಲ್ಲಿ ಮಹಾಮೈತ್ರಿ ಆಗಬಹುದು. ರಾಜ್ಯದಲ್ಲಿ ಅದು ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ನೇರವಾಗಿಯೇ ಎದುರಿಸುತ್ತೇವೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ಕೋಮು ಶಕ್ತಿಗಳ ವಿರುದ್ಧ ಮಹಾಮೈತ್ರಿ ಮಾಡಿಕೊಂಡು ಹೋರಾಟ ಮಾಡುವ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಅದು ರಾಷ್ಟ್ರ ಮಟ್ಟಕ್ಕೆ ಸೀಮಿತ. ಆ ಮಟ್ಟದಲ್ಲಿ ಮಹಾಮೈತ್ರಿ ಆಗಬಹುದು. ರಾಜ್ಯದಲ್ಲಿ ಆಗುವುದಿಲ್ಲ ಎಂದು ಹೇಳಿದರು. ದೀಪಕ್‍ರಾವ್ ಹತ್ಯೆ ಪ್ರಕರಣದ ಹಿಂದೆ ಸಚಿವ ರಮಾನಾಥ ರೈ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿರುವ ಆರೋಪ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದೆ. ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆಗಳನ್ನು ನೀಡಬಾರದು. ಈ ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದೆ. ವಿಚಾರಣೆ ನಂತರ ಸತ್ಯಾಂಶ ಏನೆಂಬುದು ಹೊರಗೆ ಬರಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ತಿಳಿಸಿದರು. ಪಿಎಫ್‍ಐ, ಎಸ್‍ಡಿಪಿಐ ಮೊದಲಾದ ಸಂಘಟನೆ ನಿಷೇಧ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ತನಿಖೆ ಮುಗಿಯಲಿ ಎಂದು ಹೇಳಿದರು.

Facebook Comments

Sri Raghav

Admin